ರಾಜ್ಯ ಸರ್ಕಾರಿ ನೌಕರರ ಬಹುಮುಖ್ಯ ಬೇಡಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿದೆ. ಇದೀಗ ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರ ಬಿದ್ದಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಸದಸ್ಯ ಐಹೊಳೆ ದುರ್ಯೋಧನ ಅವರು ಕೇಳಿದಂತ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ನವರು ಉತ್ತರಿಸಿದ್ದಾರೆ.
ರಾಜ್ಯ ಸರ್ಕಾರಿ ಸೇವೆಗೆ ಏಪ್ರಿಲ್ 2006ರ ನಂತ್ರ ನೇಮಕವಾದ ನೌಕರರಿಗೆ ಪ್ರಸ್ತುತ ನೀಡಲಾಗುತ್ತಿರುವ ಎನ್ ಪಿ ಎಸ್ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಸಿಎಂ, ದಿನಾಂಕ 01-03-2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದಿದ್ದಾರೆ.
ಇದಲ್ಲದೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಹಾಗಿದ್ದಲ್ಲಿ ಯಾವಾಗ ಜಾರಿ ಮಾಡಲಾಗುವುದು ಅಂತ ಕೇಳಿದಂತ ಪ್ರಶ್ನೆಗೆ, ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ತ್ರಿಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ದಿನಾಂಕ 19-11-2022ರಂದು ರಚಿಸಿ ಆದೇಶಿಲಾಗಿರುತ್ತದೆ. ನಂತ್ರ ದಿನಾಂಕ 06-11-2023ರ ಆದೇಶದಲ್ಲಿ ಆಯೋಗದ ಕಾಲಾವಧಿಯನ್ನು ದಿನಾಂಕ 15-03-2024ರವರೆಗೆ ವಿಸ್ತರಿಸಿ, ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
$ads={2}
ಈ ಕುರಿತಂತೆ ಸರಕಾರದ ಉತ್ತರದ ಪ್ರತಿ:👇
You May Also Like 👇
Loading...